ರಾಹುಲ್ ಗಾಂಧಿಯನ್ನು ಹೊಗಳಿದ ಪಾಕಿಸ್ತಾನದ ಕ್ರಿಕೆಟರ್ ಶಾಹಿದ್ ಅಫ್ರಿದಿ
ಇಸ್ಲಮಾಬಾದ್: ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಭಾರತದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಆರೋಪ ಮಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ.
ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತೀಯ ಆಡಗಾರರು ಗೆದ್ದ ಬಳಿಕ ಕೈಯನ್ನು ಕುಲುಕಿರಲಿಲ್ಲ. ಈ ಕುರಿತು ವಿವಾದದ ಬಗ್ಗೆ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನದ ಖಾಸಗಿ ಟಿವಿಯೊಂದಿಗೆ ಮಾತನಾಡಿದ ಶಾಹಿದ್ ಅಫ್ರಿದಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯಕ್ಕಾಗಿ ಧರ್ಮವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.
ಭಾರತದಲ್ಲಿರುವ ಸರ್ಕಾರ ಅಧಿಕಾರವನ್ನು ಉಳಿಸಿಕೊಳ್ಳಲು ಧರ್ಮವನ್ನು ಬಳಸಿಕೊಳ್ಳುತ್ತದೆ. ಹಾಗೂ ಹಿಂದೂ ಮುಸ್ಲಿಂ ಎಂಬ ಧರ್ಮವನ್ನು ಎಳೆಯುತ್ತಿದೆ. ಇದು ಸರಿಯಲ್ಲ. ಅವರು ಅಧಿಕಾರದಲ್ಲಿ ಇರುವವರೆಗೂ ಇದು ಮುಂದುವರಿಯುತ್ತದೆೆ. ಅವರಲ್ಲಿ ಕೆಲವರು ಒಳ್ಳೆಯವರು ಇದ್ದಾರೆ, ಉದಾಹರಣೆಗೆ ರಾಹುಲ್ ಗಾಂಧಿ ತುಂಬಾ ಪಾಸಿಟಿವ್ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.