CM, Azim-premji; ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಅಜೀಮ್ ಪ್ರೇಮ್ ಜೀ
ನಗರದ ಹೊರ ವರ್ತೂರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಕಾರಣ ವಿಪ್ರೋ ಕ್ಯಾಂಪಸ್ ನಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಮ್ ಪ್ರೇಮ್ ಜೀ ತಿರಸ್ಕರಿಸಿದ್ದಾರೆ. ಸಾರ್ವಜನಿಕ ರಸ್ತೆಗಾಗಿ ನಮ್ಮ ವಿಪ್ರೋ ಕ್ಯಾಂಪಸ್ ತೆರೆದಿಡಲು ಸಾಧ್ಯವಿಲ್ಲ. ಕ್ಯಾಂಪಸ್ ವಿಶೇಷ ಆರ್ಥಿಕ ವಲಯ SEZ ಆಗಿದ್ದು, ಕಟ್ಟುನಿಟ್ಟಿನ ಭದ್ರತಾ ನಿಯಮಗಳನ್ನ ಹೊಂದಿದೆ. ಕ್ಯಾಂಪಸ್ ಮೂಲಕ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ನೀಡುವುದರಿಂದ ಕಾನೂನು, ಆಡಳಿತಾತ್ಮಕ ಮತ್ತು ಶಾಸಕಾಂಗ ಸವಾಲುಗಳು ಎದುರಾಗುತ್ತವೆ ಎಂದಿದ್ದಾರೆ.
ಸೆಪ್ಟೆಂಬರ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜೀಜ್ ಪ್ರೇಮ್‌ಜಿ ಅವರಿಗೆ ಪತ್ರ ಬರೆದು, ಬೆಂಗಳೂರು ಹೊರ ವರ್ತುಲ ರಸ್ತೆಯಲ್ಲಿ ಹೆಚ್ಚುತ್ತಿರುವ ದಟ್ಟಣೆಯನ್ನು ಕಡಿಮೆ ಮಾಡುಲು ಕಂಪನಿಯು ತನ್ನ ಕ್ಯಾಂಪಸ್ ಮೂಲಕ ಸಾರ್ವಜನಿಕರ ವಾಹನ ಸಂಚಾರಕ್ಕೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದರು. ಈ ಕ್ರಮವು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಐಟಿ ಕಾರಿಡಾರ್‌ನಲ್ಲಿ ಪ್ರಯಾಣಿಸುವವರಿಗೆ ಪರಿಹಾರವನ್ನು ನೀಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದರು.
ಸಿಎಂ ಸಿದ್ದರಾಮಯ್ಯ ಅವರ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಜೀಜ್ ಪ್ರೇಮ್‌ಜಿ ಅವರು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯ ಗಂಭೀರ ಸಮಸ್ಯೆಯನ್ನು ಪರಿಹರಿಸಿದ್ದಕ್ಕಾಗಿ ನಾವು ಸಿಎಂ ಅವರನ್ನು ಶ್ಲಾಘಿಸುತ್ತೇವೆ. ಆದರೆ, ನಮ್ಮ ಸರ್ಜಾಪುರ ಕ್ಯಾಂಪಸ್ ಮೂಲಕ ಸಾರ್ವಜನಿಕ ವಾಹನಗಳಿಗೆ ಅವಕಾಶ ನೀಡುವ ಸಲಹೆಯನ್ನು ನಾವು ಒಪ್ಪುವುದಿಲ್ಲ. ಇದು ಕಂಪನಿಗೆ ಗಂಭೀರ ಕಾನೂನು, ಆಡಳಿತಾತ್ಮಕ ಮತ್ತು ಶಾಸನಬದ್ಧ ಸವಾಲುಗಳನ್ನು ಒಡ್ಡುತ್ತದೆ. ಏಕೆಂದರೆ ಇದು ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು ಸಾರ್ವಜನಿಕ ಸಂಚಾರಕ್ಕೆ ಅವಕಾಶ ನೀಡುವುದು ಸುಸ್ಥಿರ ಪರಿಹಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.