Ballari boy dies: ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.

ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ನಿನ್ನೆ ಸಂಜೆ ಆಟವಾಡುತ್ತ ತಾತನ ಮನೆ ಕಡೆಗೆ ಹೊರಟಿದ್ದ ಬಾಲಕ, ಕಾಲು ಜಾರಿ ಚರಂಡಿ ನೀರು ತುಂಬಿದ ಗುಂಡಿಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದ ಅರವಿಂದನನ್ನು ಪೋಷಕರು ಗಾಬರಿಗೊಂಡು ಹುಡುಕಲು ಆರಂಭಿಸಿದ್ದಾರೆ.

ಈ ವೇಳೆ ಬಾಲಕನ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನ ಪೋಷಕರು ಕೂಡಲೇ ಜಿಂದಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಬಾಲಕ ಚರಂಡಿ ಗುಂಡಿಯಲ್ಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಗು ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಚರಂಡಿ ನೀರಿನಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣವು ತೋರಣಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Rakesh arundi

Leave a Reply

Your email address will not be published. Required fields are marked *