ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಘೋಷಣೆ: ತೇಜಸ್ವಿ ಸೂರ್ಯ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅಧಿಕೃತ ಅನುಮೋದನೆ ನೀಡಿದೆ. ಈ ಮೂಲಕ 30 ವರ್ಷಗಳ ಬೇಡಿಕೆ ಈಡೇರಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು.
ಸದ್ಯ ಬೆಂಗಳೂರು ಮತ್ತು ಮುಂಬೈ ಮಧ್ಯೆ ಉದ್ಯಾನ್ ಎಕ್ಸ್‌ಪ್ರೆಸ್ ಒಂದೇ ಸಂಚಾರ ನಡೆಸಿದ್ದು, ಇದು 24 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡೂ ನಗರಗಳಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಹೀಗಾಗಿ 30 ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಸದ್ಯ ಈ ಹೊಸ ಸೂಪರ್ ಫಾಸ್ಟ್ ರೈಲು ಸೇವೆಯು ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕವ ದರದೊಂದಿಗೆ ಅನುಕೂಲಕರವಾಗಲಿದೆ ಎಂದು ಅವರು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬಹುದಿನದ ಕನಸನ್ನು ನನಸಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಕರ್ನಾಟಕ ಮತ್ತು ಕನ್ನಡಿಗರ ಪರವಾಗಿ ಸಂಸದ ತೇಜಸ್ವಿ ಸೂರ್ಯ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಧನ್ಯವಾದ ತಿಳಿಸಿದ್ದಾರೆ.
—-shares-