Hubli: ಹಸುಗೂಸಿನ ಹೊಟ್ಟೆಯಲ್ಲೂ ಭ್ರೂಣ.!ಹುಬ್ಬಳ್ಳಿ ಕಿಮ್ಸ್‌ ವೈದ್ಯರೇ ಶಾಕ್‌.!

ವೈಧ್ಯಕೀಯ ಲೋಕವೇ ಅಚ್ಚರಿ ಪಡುವಂತ ಘಟನೆಯೊಂದು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಆಗ ತಾನೇ ಜನಿಸಿದ ಗಂಡು ಮಗುವಿನ ಹೊಟ್ಟೆಯೊಳಗೆ ಬ್ರೂಣವೊಂದು ಕಂಡುಬಂದ ಅಚ್ಚರಿ ಘಟನೆ ನಡೆದಿದೆ. ಮಗುವಿನ ದೇಹದಲ್ಲಿ ಅಚ್ಚರಿ ಬದಲಾವಣೆ ಕಂಡು ಬಂದ ಹಿನ್ನೆಲೆ ವೈಧ್ಯಕೀಯ ಪರೀಕ್ಷೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಎರಡನೇ ಹೆರಿಗೆಗೆ ಬಂದ ತಾಯಿಗೆ ಈ ಸುದ್ದಿ ಕೇಳಿ ಶಾಕ್‌ ಆಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗರ್ಭಿಣಿಯೊಬ್ಬರು ಎರಡನೇ ಹೆರಿಗೆಗೆಂದು ಕಿಮ್ಸ್ ನ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ದಾಖಲಾಗಿದ್ದಾರೆ. ಕಳೆದ‌ ಸೆಪ್ಟಂಬರ್ 23ರಂದು ಗಂಡು ಮಗುವಿಗೆ ಈಕೆ ಜನ್ಮ ನೀಡಿದ್ದಾಳೆ. ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆಯಲ್ಲಿ ನವಜಾತ ಶಿಶುವಿಗೆ ಆಲ್ಟ್ರಾಸೌಂಡ್ ಮಾಡಿಸಲಾಗಿದೆ. ಈ ವೇಳೆ ಮಗುವಿನ ಹೊಟ್ಟೆಯಲ್ಲಿ ಬೆನ್ನುಹುರಿ ಇರುವ ಭ್ರೂಣ ಪತ್ತೆಯಾಗಿದೆ.

ಆದರೂ ಎಂಆರ್‌ಐ ಸ್ಕ್ಯಾನ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಅಂತಿಮ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸೋದಾಗಿ ತಿಳಿಸಿದ್ದು, ಇದೊಂದು ಅಪರೂಪದ ಪ್ರಕರಣ ಎಂದು ಹುಬ್ಬಳ್ಳಿ ಕಿಮ್ಸ್ ನ ವೈದ್ಯಕೀಯ ಅಧೀಕ್ಷಕ ಡಾ.ಈಶ್ವರ ಹಸಬಿ ಅಭಿಪ್ರಾಯಪಟ್ಟಿದ್ದಾರೆ. ಈತರಹದ ಸಯಾಮಿ ಅವಳಿ ಮಕ್ಕಳು ಒಂದು ಲಕ್ಷದಲ್ಲಿ ಒಂದು ಮಗುವಿಗೆ ಆಗುತ್ತದೆ ಎಂದು ಡಾಕ್ಟರ್‌ ಅಭಿಪ್ರಾಯಪಟ್ಟಿದ್ದಾರೆ.

Rakesh arundi

Leave a Reply

Your email address will not be published. Required fields are marked *