Dasara: ದುರ್ಗಾ ದೇವಿ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನದಿಗೆ ಉರುಳಿ 12 ಮಂದಿ ಸಾವು
ದೇಶವೇ ದಸರಾ ಹಬ್ಬದ ಸಂಭ್ರಮದಲ್ಲಿದ್ದರೆ, ಮಧ್ಯಪ್ರದೇಶದಲ್ಲಿ ದುರಂತವೊಂದು ಸಂಭವಿಸಿದೆ. ಖಾಂಡ್ವಾದಲ್ಲಿ ದುರ್ಗಾ ಮೂರ್ತಿಯ ವಿಸರ್ಜನೆಯ ವೇಳೆ ಟ್ರ್ಯಾಕ್ಟರ್ ಟ್ರಾಲಿ ನದಿಗೆ ಉರುಳಿ ಬಿದ್ದು 12 ಮಂದಿ ಮೃತಪಟ್ಟು, ಹಲವರು ನಾಪತ್ತೆಯಾಗಿದ್ದಾರೆ.
ದುರ್ಗಾ ದೇವಿಯ ವಿಗ್ರಹ ವಿಸರ್ಜನೆ ಮುಗಿಸಿ ಹಿಂತಿರುಗುತ್ತಿದ್ದ ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಸೇತುವೆಗೆ ಡಿಕ್ಕಿ ಹೊಡೆದು ಬಳಿಕ ನದಿಗೆ ಉರುಳಿತು. ಪೊಲೀಸರು ಮತ್ತು ಜಿಲ್ಲಾಡಳಿತ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಪಂಧಾನಾ ಪೊಲೀಸ್ ಠಾಣೆ ಪ್ರದೇಶದ ನರಸಿಂಘ ಗ್ರಾಮದ ಚಂಬಲ್ ನದಿಯಲ್ಲಿ ಈ ಘಟನೆ ಸಂಭವಿಸಿದೆ.
ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಮಕ್ಕಳು ಸೇರಿ ಸುಮಾರು 20 ಮಂದಿ ಇದ್ದರು. ಮೃತರಲ್ಲಿ 8 ಮಂದಿ ಯುವತಿಯರು ಸೇರಿದ್ದಾರೆ. ಸಂಜೆ 6 ಗಂಟೆಯ ಹೊತ್ತಿಗೆ ನದಿಯಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಪ್ರಯತ್ನ ಮುಂದುವರಿದಿದ್ದು, ಗಾಯಗೊಂಡ ಹಲವು ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಆಘಾತ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
–l-immersion–in–12 people