Kantara: Chapter 1: ಕಾಂತಾರ: ಚಾಪ್ಟರ್ 1 ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಮಾಜಿ ಸಂಸದ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಕರ್ನಾಟಕ ಸೇರಿ ದೇಶಾದ್ಯಂತ ಪ್ರೇಕ್ಷಕರಿಂದ ಅಭೂತಪೂರ್ವ ರೆಸ್ಪಾನ್ಸ್ ದೊರೆಯುತ್ತಿದೆ. ಈ ನಡುವೆ ಸಿನಿಮಾ ವೀಕ್ಷಣೆಗೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇಡೀ ಥಿಯೇಟರ್ ಬುಕ್ ಮಾಡಿದ್ದಾರೆ.
ಕಾಂತಾರ ಸಿನಿಮಾವನ್ನು ತಮ್ಮ ಅಭಿಮಾನಿಗಳು, ಬೆಂಬಲಿಗರಿಗೆ ತೋರಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇಡೀ ಥಿಯೇಟರ್ ನ ಒಂದು ಷೋ ಅನ್ನೇ ಬುಕ್ ಮಾಡಿಕೊಂಡಿದ್ದಾರೆ. ನಾಳೆ ಸಂಜೆ 4 ಗಂಟೆಯ ಫುಲ್ ಷೋ ಅನ್ನು ಪ್ರತಾಪ್ ಸಿಂಹ ಬುಕ್ ಮಾಡಿದ್ದಾರೆ.
ಈ ಕುರಿತಂತೆ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲರೂ ಬನ್ನಿ, ಕಾಂತಾರ ನೋಡೋಣ! ನಾನು ಎಲ್ಲರಿಗೂ ಟಿಕೆಟ್ ಬುಕ್ ಮಾಡಿದ್ದೇನೆ” ಎಂದು ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ.
ಮೈಸೂರಿನ ಡಿಆರ್‌ಸಿ ಸಿನೆಮಾಸ್‌ನಲ್ಲಿ ನಾಳೆ ಸಂಜೆ 4 ಗಂಟೆಯ ಪೂರ್ಣ ಶೋಗೆ ಒಟ್ಟಾರೆ ₹68,920 ಮೌಲ್ಯದ ಟಿಕೆಟ್‌ಗಳನ್ನು ಬುಕ್ ಮಾಡಲಾಗಿದೆ. ಈ ಮೂಲಕ ಬೃಹತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳು ಒಟ್ಟಾಗಿ ಚಿತ್ರ ವೀಕ್ಷಿಸಲು ಸಜ್ಜಾಗಿದ್ದಾರೆ.