Bengaluru: ಜೈಲ್ ನಲ್ಲಿ ರೌಡಿಶೀಟರ್ ಬರ್ತ್ಡೇ ಸೆಲೆಬ್ರೇಷನ್: 11 ಜನರ ವಿರುದ್ಧ ಎಫ್ಐಆರ್ ದಾಖಲು
ರೌಡಿ ಶೀಟರ್ ಗುಬ್ಬಚ್ಚಿ ಸೀನ ಜೈಲಿನೊಳಗೆಯೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿದ್ದು, ಈ ಬೆನ್ನಲೇ ಸೀನ ಸೇರಿದಂತೆ 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸೀನ ಜೈಲಿನೊಳಗೆಯೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರ ಕುರಿತು ಜೈಲರ್ ಇಮಾಮ್ ಸಾಬ್ ಪೊಲೀಸರಿಗೆ ನೀಡಿದ ದೂರಿನನ್ವಯ ಸೀನ ಸಹಚರರಾದ ಆನಂದ್, ಪ್ರವೀಣ್, ಸೂರ್ಯ, ಮಿಥುನ್, ಚೇತನ್ ಹಾಗೂ ಕಾರ್ತಿಕ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದರ್ಶನ್ಗೆ ರಾಜಾತಿಥ್ಯ ಪ್ರಕರಣ ಬೆನ್ನಲ್ಲೇ ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಆದೇಶದ ನೀಡಿದ ಬಳಿಕವು ಈ ಘಟನೆ ಬೆಳಕಿಗೆ ಬಂದಿದೆ.
ರೌಡಿಶೀಟರ್ ಗುಬ್ಬಚ್ಚಿ ಸೀನನ ಹುಟ್ಟು ಹಬ್ಬ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ದಕ್ಷಿಣ ವಲಯ ಡಿಐಜಿ ಕೆ.ಸಿ.ದಿವ್ಯಶ್ರೀ ಅವರಿಗೆ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ದಯಾನಂದ್ ಸೂಚಿಸಿದ್ದರು.