Coldrif cough: ಕಾಫ್ ಸಿರಫ್ ದುರಂತ: ರಾಜ್ಯದಲ್ಲಿ ಕಟ್ಟೆಚ್ಚರ, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಫ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೇರೆ ರಾಜ್ಯಗಳಲ್ಲಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಳಪೆ ಕಫ್ ಸಿರಪ್ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಫ್ ಸಿರಪ್ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿ ಕಫ್ ಸಿರಫ್ಗಳ ಟೆಸ್ಟ್ಗೆ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲೂ ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್ ಸಿರಫ್ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.