Caste Census: ಜಾತಿಗಣತಿ ಕಾರ್ಯ ವೇಳೆ ಮೂವರು ಶಿಕ್ಷಕರು ಸಾವು: ತಲಾ 20 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
ರಾಜ್ಯ ಸರ್ಕಾರ ನಡೆಸುತ್ತಿರುವ ಸಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದ ವೇಳೆ ಈವರೆಗೂ ಮೂರು ಮಂದಿ ಶಿಕ್ಷಕರು ಮೃತಪಟ್ಟಿದ್ದು, ಮೂರು ಸಿಬ್ಬಂದಿ ಕುಟುಂಬಕ್ಕೂ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಮೀಕ್ಷೆಗೆ ತೆರಳಿದ ವೇಳೆ ಈವರೆಗೂ ಮೂರು ಮಂದಿ ಶಿಕ್ಷಕರು ಮೃತಪಟ್ಟದ್ದಾರೆ. ಮೃತ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಸಕಾಲದಲ್ಲಿ ಶಿಕ್ಷಕರು ಸಮೀಕ್ಷೆ ಕಾರ್ಯ ಮುಗಿಸುವುದಗಿ ಭರವಸೆ ನೀಡಿದ್ದಾರೆ. ಸಮೀಕ್ಷೆ ಮಾಡಲು ಹಿಂದೇಟು ಹಾಕಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇನ್ನು ಸಮೀಕ್ಷೆ ಮಾಡುವವರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು.