Bigg Boss: ಬಿಗ್ಬಾಸ್ ಸ್ಪರ್ಧಿಗಳು ಈಗಲ್ ಟನ್ ರೆಸಾರ್ಟ್ಗೆ ಶಿಫ್ಟ್
ಕನ್ನಡದ ಬಿಗ್ ಬಾಸ್ 12ನೇ ಆವೃತ್ತಿ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಕೃತ ಅನುಮತಿ ಪಡೆದಿಲ್ಲ ಎಂದು ರಾಮನಗರ ತಹಶೀಲ್ದರ್ ತೇಜಸ್ವಿನಿ ಅವರ ಜೊತೆ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ. ಸದ್ಯ ಬಿಗ್ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ.
ಸದ್ಯ ಬಿಗ್ ಬಾಸ್ನ ಎಲ್ಲ 17 ಕಂಟೆಸ್ಟೆಂಟ್ಗಳನ್ನು ಸಿಲಿಕಾನ್ ಸಿಟಿಯ ಈಗಲ್ ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ. ಇನ್ನೋವಾ ಕಾರಿನಲ್ಲಿ ಸ್ಪರ್ಧಿಗಳನ್ನು ಕರೆದುಕೊಂಡು ಹೋಗಲಾಗಿದೆ. ಸದ್ಯ ಬಿಗ್ ಬಾಸ್ ನಡೆಯುತ್ತಿದ್ದ ಮನೆ ಸಂಪುರ್ಣ ಖಾಲಿ ಖಾಲಿಯಾಗಿದೆ.
ಪೊಲೀಸರ ಬಿಗಿ ಭದ್ರತೆಯಲ್ಲಿ ಸ್ಪರ್ಧಿಗಳನ್ನು ಈಗಲ್ಟನ್ ರೆಸಾರ್ಟ್ಗೆ ಕರೆದುಕೊಂಡು ಹೋಗಲಾಗಿದೆ. ಸಾರ್ವಜನಿಕರಿಂದ ಅಂತರ ಕಾಯ್ದುಕೊಳ್ಳಲು ಒಂದೊಂದು ಕಾರು ಒಂದೊಂದು ರಸ್ತೆ ಮೂಲಕ ಸುತ್ತಾಡಿಕೊಂಡು ರೆಸಾರ್ಟ್ ತಲುಪಿವೆ.