Bigg Boss: ಕನ್ನಡ ‘ಬಿಗ್ ಬಾಸ್12’: ತಾತ್ಕಾಲಿಕ ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ
ಮಾಲಿನ್ಯ ನಿಯಮ ಉಲ್ಲಂಘನೆ ಆರೋಪದ ಮೇಲೆ ಕನ್ನಡ ‘ಬಿಗ್ ಬಾಸ್ ಸೀಸನ್ 12’ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಸರ್ಕಾರ ಬೀಗ ಹಾಕಿತ್ತು. ಇದರಿಂದ ಬಿಗ್ ಬಾಸ್ ಶೋ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಎಲ್ಲಾ ಸ್ಪರ್ಧಿಗಳನ್ನು ರೆಸಾರ್ಟ್ಗೆ ಸ್ಥಳಾಂತರ ಮಾಡಲಾಗಿದೆ. ಈ ಬೆನ್ನಲೇ ಜಾಲಿವುಡ್ ಸ್ಟುಡಿಯೋಸ್ನ ವೇಲ್ಸ್ ಸ್ಟುಡಿಯೋಸ್ನವರು ತಾತ್ಕಾಲಿಕ ಅನುಮತಿ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ವೆಲ್ಸ್ ಸ್ಟುಡಿಯೋಸ್ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. 15 ದಿನಗಳ ಕಾಲಾವಕಾಶ ನೀಡಿ ಅಷ್ಟರಲ್ಲಿ ಎಲ್ಲಾ ನಿಯಮ ಉಲ್ಲಂಘನೆಗಳನ್ನು ಸರಿಪಡಿಸುತ್ತೇವೆ, ಸದ್ಯಕ್ಕೆ ನಮಗೆ ತಾತ್ಕಾಲಿಕ ಅನುಮತಿಯನ್ನು ನೀಡಿ, ಆ ನಂತರ ಪರಿಶೀಲನೆ ನಡೆಸಿ ಅನುಮತಿಯನ್ನು ನವೀಕರಣಗೊಳಿಸಿ ಎಂದು ಪತ್ರದಲ್ಲಿ ವೇಲ್ಸ್ ಸ್ಟುಡಿಯೋ ಮನವಿ ಮಾಡಿದೆ.
ಕನ್ನಡದ ಬಿಗ್ ಬಾಸ್ 12ನೇ ಆವೃತ್ತಿ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಕೃತ ಅನುಮತಿ ಪಡೆದಿಲ್ಲ ಎಂದು ರಾಮನಗರ ತಹಶೀಲ್ದರ್ ತೇಜಸ್ವಿನಿ ಅವರ ಜೊತೆ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ. ಬಿಗ್‌ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಸದ್ಯ ಈಗಲ್ ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ.