Murder Case: ಗಂಗಾವತಿಯಲ್ಲಿ ಭೀಕರ ಮರ್ಡರ್: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ
ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ.
ವೆಂಕಟೇಶ ಕುರುಬರ (31) ಹತ್ಯೆಯಾದ ಯುವಕ. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ವೆಂಕಟೇಶ್ ಕೊಪ್ಪಳದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್ನಿಂದ ಗಂಗಾವತಿ ಕಡೆಗೆ ವೆಂಕಟೇಶ್ ಬೈಕ್ನಲ್ಲಿ ಬರುತ್ತಿದ್ದರು. ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಗ್ಯಾಂಗ್ ಬೈಕ್ಗೆ ಗುದ್ದಿ ಅಡ್ಡಗಟ್ಟಿ ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಘಟನೆಯ ಸ್ಥಳಕ್ಕೆ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.