H.D. Deve Gowda: ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ ಮುಖ್ಯಸ್ಥ ಹೆಚ್ಡಿ ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ. ಈ ಹಿನ್ನಲೇಯಲ್ಲಿ ಅವರನ್ನು ಸಾಮಾನ್ಯ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿತೆ ಆಗಿದೆ. ಇದರಿಂದ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ದೇವೇಗೌಡರ ಆರೋಗ್ಯದ ಮೇಲೆ ವೈದ್ಯರ ವಿಶೇಷ ತಂಡ ನಿಗಾ ವಹಿಸಿದೆ ಎಂದು ಎಂದು ಮಣಿಪಾಲ್ ಆಸ್ಪತ್ರೆ ಮೂಲಗಳು ತಿಳಿಸಿವೆ.