Mangalore: ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ, ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ದೈವದ ನುಡಿ
ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆ ಆದ ಬಳಿಕ ದೈವದ ಅನುಕರಣೆ ಮಾಡುತ್ತಿರುವವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂತಾರ ಸಿನಿಮಾ ವೀಕ್ಷಿಸಿದ ಕೇಲವರು ಅತಿರೇಕದ ವರ್ತನೆಯಿಂದ ದೈವದ ಅನುಕರಣೆ ಮಾಡುತ್ತಿರುವುದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಬೇಸಗೊಂಡ ದೈವಾರಾಧಕರು ಮಂಗಳೂರು ಹೊರವಲಯದ ಬಜಪೆ ಸಮೀಪದ ಶ್ರೀ ಕ್ಷೇತ್ರ ಪೆರಾರದ ಬಲವಂಡಿ, ಪಿಲಿಚಂಡಿ ದೈವದ ಮುಂದೆ ದೈವಾರಾಧನೆಯ ಅಪಹಾಸ್ಯದ ವಿರುದ್ಧ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.
ಈ ವೇಳೆ ಪಿಲಿಚಂಡಿ ದೈವವು ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನಾನು ನೋಡಿಕೊಳ್ಳುತ್ತೇನೆ. ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ಅಪಚಾರ ಮಾಡುವವರಿಗೆ ನಾನು ಬುದ್ದಿ ಕಲಿಸುತ್ತೇನೆ. ಇನ್ಮುಂದೆ ಎಲ್ಲಾ ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಲ್ಲಿಸಿ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ’ ಎಂದು ಹೇಳಿದೆ.