HD Deve Gowda: ಎಚ್ಡಿ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ: ಕುಮಾರಸ್ವಾಮಿ
ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಹೆಚ್ಡಿ ದೇವೇಗೌಡರನ್ನು ಅನಾರೋಗ್ಯದಲ್ಲಿ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯು ವಾರ್ಡ್ ನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಈಗ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಮಾತಾನಾಡಿ, ದೇವೇಗೌಡರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ. ಮೂರು-ನಾಲ್ಕು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.