Bengaluru: ಬಿಹಾರ ಚುನಾವಣೆಗೆ 300 ಕೋಟಿ ಫಂಡಿಂಗ್ ಮಾಡಿ ಮಂತ್ರಿ ಪಟ್ಟದ ಷರತ್ತು ಹಾಕಿದ್ರಾ ಕಾಂಗ್ರೆಸ್ ಶಾಸಕ? ಏನಿದು ಸ್ಫೋಟಕ ವಿಷಯ..!
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅಕ್ರಮ ಆನ್ಲೈನ್ ಗೇಮ್ ಕೇಸ್ ಸಂಬಂಧ ಸದ್ಯ ಜೈಲು ಸೇರಿದ್ದಾರೆ. ರಾಜ್ಯ ಸಚಿವ ಸಂಪುಟ ಸೇರಿಸಿಕೊಳ್ಳುವಂತೆ ವೀರೇಂದ್ರ ಪಪ್ಪಿ ಷರತ್ತುವೊಂದನ್ನ ಹಾಕಿದ್ರಂತೆ. ಬಿಹಾರ ಚುನಾವಣೆಗೆ 300 ಕೋಟಿ ರೂಪಾಯಿ ಫಂಡ್ ಮಾಡಲು ಸಿದ್ಧವಾಗಿದ್ದರು ಎನ್ನಲಾಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಫಂಡಿಂಗ್ ಮಾಡಿ, ತಾನು ಮಂತ್ರಿಯಾಗಲು ಪ್ಲ್ಯಾನ್ ಸಹ ಮಾಡಿಕೊಂಡಿದ್ದರು ಎನ್ನುವ ಸ್ಫೋಟಕ ಅಂಶ ತಿಳಿದುಬಂದಿದೆ.
ಅಕ್ರಮ ಆನ್ಲೈನ್ ಗೇಮ್ ಕೇಸ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಹಲವೆಡೆ ಶೋಧ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬ್ಯಾಂಕ್ನ 2 ಲಾಕರ್ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಇದುವರೆಗೂ ಬರೋಬ್ಬರಿ 150 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳ ಜಪ್ತಿ ಮಾಡಲಾಗಿದೆ.
ಇದಕ್ಕೂ ಮುನ್ನ ಇತ್ತೀಚೆಗೆ ಇಡಿ ಅಧಿಕಾರಿಗಳು 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿತ್ತು. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದುರು. ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ.