Priyank Kharge: ಆರ್‌ಎಸ್ಎಸ್ ಪ್ರತಿಪಾದಿಸುವ ಸಿದ್ದಾಂತದ ಪರಿಣಾಮದಿಂದಲೇ ಸಿಜೆಐ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ: ಪ್ರಿಯಾಂಕ್ ಖರ್ಗೆ

ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ಹತ್ತಿಕ್ಕಲು ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದಕ್ಕೆ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.

ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.

ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್‌ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್‌ಎಸ್ಎಸ್‌ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

Rakesh arundi

Leave a Reply

Your email address will not be published. Required fields are marked *