CM Siddaramaiah: ರಾಜ್ಯದಲ್ಲಿ ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಅನುಮತಿ ನೀಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

Rakesh arundi

Leave a Reply

Your email address will not be published. Required fields are marked *