RV Deshpande: ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ದೇಶಪಾಂಡೆ
ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಗ್ಯಾರಂಟಿ ವಿರುದ್ಧ ಮಾತನಾಡಿಲ್ಲ. ಬದಲಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದೇನೆ ಎಂದು ಮಾಜಿ ಸಚಿವ ಆರ್‌ವಿ ದೇಶಪಾಂಡೆ ಹೇಳಿದ್ದಾರೆ.
ನಾನು ಸಿಎಂ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರಲಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರು ಮಾಧ್ಯಮ ಪ್ರಕಟಣೆ ಮೂಲಕ ಆರ್‌ವಿ ದೇಶಪಾಂಡೆ ಸ್ಪಷ್ಟನೆ ನೀಡಿದ್ದಾರೆ.
ನಾನು ಗ್ಯಾರಂಟಿ ಯೋಜನೆಗಳ ಕುರಿತು ಹೇಳುವಾಗ ಮುಖ್ಯಮಂತ್ರಿಯವರ ಸಮೀಪದಲ್ಲಿರುವವನು, ಆದರೆ ಸಿದ್ದರಾಮಯ್ಯನವರು ಯಾವ ಯೋಜನೆಗಳನ್ನು ಘೋಷಿಸುತ್ತಾರೆ ಎಂಬುದು ನನಗೂ ಗೊತ್ತಿರುವುದಿಲ್ಲ. ಸಿದ್ದರಾಮಯ್ಯನವರು ಅನುಭವ ಹೊಂದಿರುವ ನಾಯಕ ಅವರು ಬಡವರ ಪರವಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇದು ಅವರ ಶಕ್ತಿ ಎಂದಿದ್ದೆ. ನನ್ನ ಮಾತಿನ ಉದ್ದೇಶ ಗ್ಯಾರಂಟಿ ಯೋಜನೆಗಳ ವಿರುದ್ಧ ಅಲ್ಲ. ಸಿದ್ದರಾಮಯ್ಯ ಅವರ ಜನಪರ ಆಡಳಿತದ ಬಗ್ಗೆ ಹೊಗಳಿದ್ದೇನೆ ಹೊರೆತು ಟೀಕಿಸಿಲ್ಲ. ಗ್ಯಾರಂಟಿಯಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಆಗಿದೆ ಎಂದು ಹೇಳಿಲ್ಲ. ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.