Raju Talikote: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ
ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.
ರಾಜು ತಾಳಿಕೋಟೆ ಅವರು ಉಡುಪಿಯಲ್ಲಿ ಸಿನಿಮಾವೊಂದರ ಶೂಟಿಂಗ್ ಮುಗಿಸಿ ರೂಮುನಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ತಿಳಿದು ಬಂದಿದೆ. ರಾಜು ತಾಳಿಕೋಟೆಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ರಾಜು ತಾಳಿಕೋಟೆಯವರು ‘ಮನಸಾರೆ’ ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ‘ಪಂಚರಂಗಿ’, ‘ಲೈಫು ಇಷ್ಟೇನೇ’, ‘ರಾಜಧಾನಿ’, ‘ಅಲೆಮಾರಿ’, ‘ಮೈನಾ’, ‘ಟೋಪಿವಾಲಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಬಿಗ್ ಬಾಸ್ ಸೀಸನ್ 7ರಲ್ಲಿ ಅವರು ಸ್ಪರ್ಧಿಯಾಗಿ ಭಾಗವಹಿಸಿದ್ದರು.