Fraud: ಸೈಟ್ ಕೊಡಿಸುವುದಾಗಿ 139 ಕಿರುತೆರೆ ಕಲಾವಿದರಿಗೆ ವಂಚನೆ; ಬಿಲ್ಡರ್ ಸೇರಿದಂತೆ ಐವರ ಮೇಲೆ ಎಫ್ಐಆರ್

ಬೆಂಗಳೂರಿನಲ್ಲಿ ಕಿರುತೆರೆ ನಟ ನಟಿಯರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಬಿಲ್ಡರ್ ಭಗೀರಥ ಸೇರಿದಂತೆ ಐವರ ವಿರುದ್ದ ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. 139 ಕಿರುತೆರೆ ಕಲಾವಿದರು ಈ ಜಾಲಕ್ಕೆ ಸಿಲಿಕಿದ್ದಾರೆ. ಸೈಟ್ ಕೊಡಿಸುವುದಾಗಿ ಹೇಳಿದ ಬಿಲ್ಡರ್ ಭಗೀರಥ ಹಾಗೂ ಸಂಜೀವ್ ತಗಡೂರು ಅವರನ್ನು ನಂಬಿದ ಕಲಾವಿದರು ಬರೋಬ್ಬರಿ 1.6 ಕೋಟಿ ರೂಪಾಯಿ ಕೊಟ್ಟು ಮೋಸ ಹೋಗಿದ್ದಾರೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸದಸ್ಯೆ ಭಾವನ ಬೆಳಗೆರೆಯವರು ಕೂಡ ಈ ಜಾಲಕ್ಕೆ ಸಿಲುಕಿದ್ದು, ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೆಟಿವಿಎ ನಲ್ಲಿ ಸೈಟ್ ಕಮಿಟಿ ಸದಸ್ಯ ಆಗಿದ್ದ ಸಂಜೀವ್ ತಗಡೂರು 2015 ರಲ್ಲಿ ಸೈಟ್ ಕೊಡಿಸುವುದಾಗಿ ಬಿಲ್ಡರ್ ಜೊತೆ ವ್ಯವಹಾರ ಮಾಡಿದ್ದರು. ಬಳಿಕ ಸದಸ್ಯರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಸೈಟ್ ನೀಡದೇ ವಂಚನೆ ಮಾಡಿದ್ದಾರೆ. ನಕಲಿ ಲೇಔಟ್ ಪ್ಲಾನ್ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿ ಒಟ್ಟು 1.6 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ದೂರುನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಬೆಂಗಳೂರಿನ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





Rakesh arundi

Leave a Reply

Your email address will not be published. Required fields are marked *