Priyank Kharge: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆ
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಗುರುತು ಪತ್ತೆಯಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ.
ಖರ್ಗೆಗೆ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದ್ದು, ಆತನನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ದೂರು ನೀಡಲು ಹಿಂದೇಟು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬೆಂಗಳೂರು ಪೊಲೀಸರು ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟಿದ್ದು, ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.