Madikeri: ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ..

ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಕಾತರರಾಗಿ ಕಾಯುತ್ತಿದ್ದಾರೆ.

ಕೊಡಗಿನ ಜನರ ಕುಲದೇವತೆ ಕರ್ನಾಟಕದ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರದಲ್ಲಿ ಭರ್ಜರಿ ಸಿದ್ದತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ಹೊರರಾಜ್ಯದಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ಧತೆ ನಡೆಯುತ್ತಿದೆ.

ಸದ್ಯ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Rakesh arundi

Leave a Reply

Your email address will not be published. Required fields are marked *