Raichur: ರಾಯಚೂರಿನಲ್ಲಿ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಿಡಿಓ ಅಮಾನತು
ರಾಜ್ಯ ಸರ್ಕಾರ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಆ ಬೆನ್ನಲ್ಲೇ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ಗ್ರಾಮ ಪಂಚಾಯತ್ ಪಿಡಿಓ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರವೀಣ್ ಕುಮಾರ್ ಕೆ.ಪಿ ಅಮಾನತುಗೊಂಡಿರುವ ಪಿಡಿಓ. ರಾಯಚೂರು ಜಿಲ್ಲೆಯ ಸಿರಿವಾರದಲ್ಲಿ ಪ್ರವೀಣ್ ಕುಮಾರ್ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಕಾರಣಕ್ಕೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.