Priyank Kharge: ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಭಗವಾಧ್ವಜ, ಬ್ಯಾನರ್ಗಳ ತೆರವು
ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಸೇರಿದಂತೆ ಖಾಸಗಿ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ನಿರ್ಬಂಧ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ಸಚಿವ ಪ್ರಿಯಾಂಕ್ ಖರ್ಗೆಯವರ ಚಿತ್ತಾಪುರ ಕ್ಷೇತ್ರದಲ್ಲಿ ನಡೆದಿದೆ. ಅಕ್ಟೋಬರ್ 19ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕಾಗಿ ಅಳವಡಿಸಿದ ಆಲಂಕಾರಿಕ ಭಗವಾ ಧ್ವಜಗಳು, ಬ್ಯಾನರ್ಗಳು, ಕೇಸರಿ ಪತಾಕೆಗಳನ್ನು ತೆರವುಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಸರ್ಕಾರಿ ಜಾಗಗಳು, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ಆಯೋಜಿಸಿತ್ತು. ಚಿತ್ತಾಪುರ ಪಟ್ಟಣದ ಪ್ರಮುಖ ವೃತ್ತದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಕೇಸರಿ ಬಣ್ಣದ ಪತಾಕೆ, ಅಭಿಮಾನಿಗಳು ಬ್ಯಾನರ್ಗಳನ್ನು, ಭಗವಾ ಧ್ವಜಗಳನ್ನು ಕಟ್ಟಿದ್ದರು.
ಹೀಗಾಗಿ ಚಿತ್ತಾಫುರದಲ್ಲಿ ಅನುಮತಿ ಪಡೆಯದೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದ ಹಿನ್ನೆಲೆ ಪುರಸಭೆ ನೌಕರರು-ಸಿಬ್ಬಂದಿಗಳು ಭಗವಾ ಧ್ವಜ, ಬ್ಯಾನರ್ಗಳನ್ನು ತೆರವು ಮಾಡಿದ್ದಾರೆ. ಸರ್ಕಾರದ ಕ್ರಮಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿ ಸಿವೆ. ತೀವು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ.