Bengaluru: ಇ-ಖಾತಾ ಮಾಡಿಕೊಡಲು ಹಣಕ್ಕೆ ಬೇಡಿಕೆ: ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಡಿಸಿಎಂ ಸೂಚನೆ
ಇ-ಖಾತಾ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ನಗರದ ಕೆ.ಆರ್.ಪುರಂ ವ್ಯಾಪ್ತಿಯ ಟಿ.ಸಿ.ಪಾಳ್ಯದ ವೆಂಗಯ್ಯ ಇಕೋ ಪಾರ್ಕ್ನಲ್ಲಿ ನಡಿಗೆ ಕಾರ್ಯಕ್ರಮ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಾದ ಕಾರ್ಯಕ್ರದಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಈ ವೇಳೆ ಓರ್ವ ವ್ಯಕ್ತಿ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ದೂರು ನೀಡಿದ್ದಾರೆ.
ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಹೆಸರು ಹೇಳಿವಂತೆ ಡಿಸಿಎಂ ಕೇಳಿದರು. ಈ ವೇಳೆ ಎಆರ್ ಒ ಬಸವರಾಜ್ ಹಾಗೂ ಆರ್ ಐ ವಿಜನಪುರ ಎಂದು ತಿಳಿಸಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದರು.