Bengaluru: ಸೀನಿಯರ್ ಕಿರುಕುಳಕ್ಕೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
ಸೀನಿಯರ್ ವಿದ್ಯಾರ್ಥಿ ನೀಡಿದ ಕಿರುಕುಳ ತಡೆಯಲಾರದೆ ಬೆಂಗಳೂರಿನ ಬಾಗಲೂರಿನ ಪಿಜಿಯಲ್ಲಿ ಬಿಬಿಎ ವಿದ್ಯಾರ್ಥಿನಿಯೊಬ್ಬಳು ತಾನು ವಾಸಿಸುತ್ತಿದ್ದ ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸನಾ ಪರ್ವೀನ್ ಎಂದು ಗುರುತಿಸಲಾಗಿದೆ.
ಅಕ್ಟೋಬರ್ 17ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸನಾ ಸಾವಿಗೆ ಅದೇ ಕಾಲೇಜಿನ ಪಾಸ್ಔಟ್ ವಿದ್ಯಾರ್ಥಿ ರಿಫಾಸ್ ಎಂಬಾತನ ಕಿರುಕುಳ ಕಾರಣ. ಈತ ಪಾಸ್ ಔಟ್ ಆಗಿದ್ದರೂ ಸನಾಗೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.