Kalaburagi: ಮತಗಳ್ಳತನ ಪ್ರಕರಣ: ಬಿಜೆಪಿ ಶಾಸಕ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆಗಳು ಪತ್ತೆ!

2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಕಳ್ಳತನದ ಆರೋಪ ದೇಶಾದ್ಯಂತ ಸದ್ದು ಜೋರಾಗಿದೆ. ನಿನ್ನೆ ಎಸ್ಐಟಿ ಅಧಿಕಾರಿಗಳು, ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಭಾಷ್ ಮನೆ ಬಳಿಯೇ ಕೆಲ ದಾಖಲೆಗಳನ್ನ ಸುಟ್ಟಿರುವುದು ಪತ್ತೆಯಾಗಿದೆ.

ಆಳಂದದ ಹಳ್ಳದ ಬಳಿ ಸುಟ್ಟು ಬಿದ್ದಿರುವ ಹಲವು ದಾಖಲೆಗಳ ಪರಿಶೀಲನೆ ನಡೆಸಿರುವ ಎಸ್ಐಟಿ ಅಧಿಕಾರಿಗಳು, ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ ಸುಭಾಷ್ ಗುತ್ತೆದಾರ್ ಮನೆಯಲ್ಲಿನ ಸಿಸಿಟಿವಿ ಡಿವಿಆರ್ ಅನ್ನು ವಶಕ್ಕೆ ಪಡೆಯಲಾಗಿದೆ.

ಮತದಾರರ ಸುಟ್ಟ ದಾಖಲೆಗಳು ಪತ್ತೆಯಾದ ಬಗ್ಗೆ ಪ್ರತಿಕ್ರಿಯಿಸಿದ ಗುತ್ತೇದಾರ್, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮನೆ ಕ್ಲೀನ್ ಮಾಡುವುದು ವಾಡಿಕೆ. ಅದರಂತೆ ಕೆಲವು ವೇಸ್ಟ್ ಸಾಮಗ್ರಿಗಳನ್ನು, ಹಳೆಯ ನ್ಯೂಸ್ ಪೇಪರ್ ಸೇರಿದಂತೆ ಉಪಯೋಗಕ್ಕೆ ಬಾರದ ಕಾಗದಗಳನ್ನು ಮನೆ ಕೆಲಸದವರು ಸುಟ್ಟಿದ್ದಾರೆ ಎಂದಿದ್ದಾರೆ.

ನಮಗೆ ಏನಾದರೂ ದುರುದ್ದೇಶವಿದ್ದರೆ, ಅದನ್ನು ನಮ್ಮ ಮನೆಯಿಂದ ದೂರ ಸುಟ್ಟುಹಾಕುತ್ತಿದ್ದೇವು. ಯಾರಾದರೂ ಅದನ್ನು ಮನೆಯ ಮುಂದೆ ಏಕೆ ಸುಟ್ಟು ಹಾಕುತ್ತಾರೆ? ಇದರ ಹಿಂದೆ ಯಾವುದೇ ದುರುದ್ದೇಶಗಳಿರಲಿಲ್ಲ” ಎಂದು ಬಿಜೆಪಿ ಮಾಜಿ ಶಾಸಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾವು ಯಾವುದೇ ಮತಗಳವು ಮಾಡಿಲ್ಲ, ಮತಗಳನ್ನು ಡಿಲೀಟ್ ಮಾಡಿಲ್ಲ. ನನ್ನ ವಿರುದ್ಧ ಕಾಂಗ್ರೆಸ್​ನವರ ಆರೋಪ ಸುಳ್ಳು ಎಂದು ಹೇಳಿದ್ದಾರೆ.

Rakesh arundi

Leave a Reply

Your email address will not be published. Required fields are marked *