Mysuru: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.

ಆರ್ಯ (9) ಮೋಹಿತ್ (8) ಮೃತ ಮಕ್ಕಳು. ಬದನವಾಳು ಗ್ರಾಮದ ಹೊಸಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರಿನಲ್ಲಿ ಮುಳುಗಿ ಹೋಗಿದ್ದಾರೆ. ಬಾಲಕರು ಕೆರೆಯಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ರಕ್ಷಣೆ ಮಾಡಲು ಮುಂದಾದರೂ, ಅಷ್ಟರಲ್ಲಿ ಮಕ್ಕಳ ಪ್ರಾಣ ಹೋಗಿತ್ತು. ಕೆರೆ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Rakesh arundi

Leave a Reply

Your email address will not be published. Required fields are marked *