Kalaburagi: ಚಿತ್ತಾಪೂರದಲ್ಲಿ ನ.2 ಕ್ಕೆ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ

ಚಿತ್ತಾಪುರದಲ್ಲಿ ಭಾನುವಾರ ನಡೆಯಬೇಕಿದ್ದ ಪಥಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದನ್ನು ಪ್ರಶ್ನಿಸಿ ಆರ್.ಎಸ್.ಎಸ್ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಪಥಸಂಚಲನಕ್ಕೆ ಅಸ್ತು ಎಂದಿದೆ. ಹೈಕೋರ್ಟ್ ಆದೇಶದ ಅನ್ವಯ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡಿದೆ.

ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ, ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.

Rakesh arundi

Leave a Reply

Your email address will not be published. Required fields are marked *