Caste Census: ಬೆಂಗಳೂರಿನಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಜನಗಣತಿ ಸಮೀಕ್ಷೆಗೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ.
ನಾಳೆಯಿಂದ ಅಕ್ಟೋಬರ್ 23ರವರೆಗೆ ಸಮೀಕ್ಷೆ ಸ್ಥಗಿತಗೊಳ್ಳಲಿದ್ದು, ದೀಪಾವಳಿ ಹಬ್ಬ ಮುಗಿದ ಬಳಿಕ ಮತ್ತೆ ಅಕ್ಟೋಬರ್ 23ರಿಂದ 31ರವರೆಗೆ ಸಮೀಕ್ಷೆಯನ್ನು ಮುಂದುವರಿಸುವಂತೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ಸಂಜೆ ಕೃಷ್ಣಾದಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ.