ಕೃತಿಕಾಗೆ ಅನಸ್ತೇಷಿಯಾ ಕೊಟ್ಟಿದ್ದು ತಾನೇ ಎಂದು ಒಪ್ಪಿಕೊಂಡ ಪಾಪಿ ಪತಿ…!
ಡಾಕ್ಟರ್ ಕೃತಿಕಾಗೆ ತಾನೇ ಅನಸ್ತೇಷಿಯಾ ಕೊಟ್ಟಿದ್ದು ಎಂದು ಆರೋಪಿ ಮಹೇಂದ್ರ ರೆಡ್ಡಿ ಒಪ್ಪಿಕೊಂಡಿದ್ದಾನೆ. ಕೃತಿಕಾ ಪೋಷಕರು ತನಗೆ ಮೋಸ ಮಾಡಿ ಮದುವೆ ಮಾಡಿದ್ದಾರೆ. ಹೀಗಾಗಿ ರಿವೆಂಜ್ ತೀರಿಸಿಕೊಳ್ಳಲು ಹತ್ಯೆಗೆ ಪ್ಲಾನ್ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
ಕೃತಿಕಾ ಪೋಷಕರು ಕೃತಿಕಾ ಮತ್ತು ಮಹೇಂದ್ರ ರೆಡ್ಡಿ ಮದುವೆಯನ್ನು ಬಹಳ ಅದ್ಧೂರಿಯಾಗಿ ಮಾಡಿಕೊಟ್ಟಿದ್ದರು. ಆದರೆ ಅವಳ ಆರೋಗ್ಯ ಸಮಸ್ಯೆಯನ್ನು ಮುಚ್ಚಿಟ್ಟುದ್ದರು. ಮದುವೆಯ ನಂತರ ಮಹೇಂದ್ರಗೆ ಕೃತಿಕಾ ಆರೋಗ್ಯ ಸಮಸ್ಯೆಯ ಬಗ್ಗೆ ಗೊತ್ತಾಯಿತು ಎಂದು ಆರೋಪಿಸಿದ್ದಾನೆ.
ಕೃತಿಕಾ ಏನೇ ತಿಂದರೂ ಕುಡಿದರೂ ವಾಂತಿ ಮಾಡುತ್ತಿದ್ದಳು. ಪಾರ್ಟಿಗಳಲ್ಲಿ ಇದು ಮುಜುಗರಕ್ಕೆ ಕಾರಣವಾಗುತ್ತಿತ್ತು. ನಿನಗೆ ರೋಗದ ಹೆಂಡತಿ ಸಿಕ್ಕಿದ್ದಾಳೆ ಎಂದು ಸ್ನೇಹಿತರು ತಮಾಷೆ ಮಾಡುತ್ತಿದ್ದರು ಎಂದು ಅವನು ಹೇಳಿಕೊಂಡಿದ್ದಾನೆ. ಇದರಿಂದ ಮಹೇಂದ್ರಗೆ ಪತ್ನಿಯ ಮೇಲೆ ಬೇಸರ ಅನಿಸುತ್ತಿತ್ತು. “ತಾನು ಒಂದೊಳ್ಳೆ ಜೀವನದ ಕನಸು ಕಂಡಿದ್ದೆ. ಆದರೆ ರೋಗಿಷ್ಟೆಯೊಬ್ಬಳನ್ನು ಮದುವೆ ಮಾಡಿಸಿದರು” ಎಂದು ಆರೋಪಿಸಿದ್ದಾನೆ.
ಈ ಕಾರಣಕ್ಕೆ ಪತ್ನಿಯಿಂದ ದೂರವಾಗಲು ನಿರ್ಧರಿಸಿದ್ದನಂತೆ. ತನಗೆ ಸಿಗಬೇಕಾದ ಪ್ರೀತಿಗಾಗಿ ತಾನು ಮತ್ತೊಬ್ಬ ಯುವತಿಯನ್ನು ಪ್ರೀತಿ ಮಾಡಿದ್ದೆ. ಕೃತಿಕಾ ಸಾವನ್ನಪ್ಪಿದರೆ ತಾನು ಪ್ರೀತಿಸಿದಾಕೆ ಜೊತೆ ಇರಬಹುದು ಎಂಬ ಕಾರಣಕ್ಕೆ ಪ್ಲಾನ್ ಮಾಡಿ ಕೊಲೆ ಮಾಡಿದೆ ಎಂದು ತಪ್ಪು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.