RSS: ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಅಡುಗೆ ಸಿಬ್ಬಂದಿ ಸಸ್ಪೆಂಡ್
ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾದ ವಸತಿ ನಿಲಯದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಸಸ್ಪೆಂಡ್ ಮಾಡಿರುವ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕರಾದ ಪ್ರಮೋದ್ ರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಬಸವಕಲ್ಯಾಣದಲ್ಲಿ ನಡೆದ ಆರ್ಎಸ್ಎಸ್ ಪಥ ಸಂಚಲನದಲ್ಲಿ ಸಿಬ್ಬಂದಿ ಪ್ರಮೋದ್ ಭಾಗಿಯಾಗಿದ್ದರು. ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿ ತಾಲೂಕಾಧಿಕಾರಿ ಆದೇಶ ಹೊರಡಿಸಿದ್ದಾರೆ.