Next CM: ಸಿದ್ದರಾಮಯ್ಯ ನಂತರ ಮುಂದಿನ ಸಿಎಂ ಯಾರು..? ಯತೀಂದ್ರ ಹೊಸ ಬಾಂಬ್!
ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯದ ಕೊನೆಗಾಲದಲ್ಲಿದ್ದಾರೆ ಎಂದು ಎಂಎಲ್‌ಸಿ ಡಾ. ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಬೆನ್ನಲೇ ಸಿಎಂ ಅವರ ಪುತ್ರ ಯತೀಂದ್ರ ಮಾತು ಕಾಂಗ್ರೆಸ್ನಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯತೀಂದ್ರ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಮುಂದಿನ ರಾಜಕೀಯಕ್ಕೆ ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಹೀಗಾಗಿ ಸತೀಶ್ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ ಎಂದು ಭಾವಿಸುತ್ತೇನೆ. ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗಬೇಕು ಎಂದು ಪರೋಕ್ಷವಾಗಿ ಸುಳಿವು ನೀಡಿದ್ದಾರೆ.