Raichur: ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ: ಡಿಕೆ ಶಿವಕುಮಾರ್
ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ನಂತರ ಮುಂದಿನ ಸಿಎಂ ಸಚಿವ ‘ಸತೀಶ್ ಜಾರಕಿಹೊಳಿ’ ಎಂದು ಜಾರಕಿಹೊಳಿ ಹೆಸರು ಮುನ್ನೆಲೆಗೆ ತಂದಿದ್ದರು. ಹೇಳಿಕೆ ಕುರಿತು ಡಿಕೆ ಶಿವಕುಮಾರ್ ರಾಯಚೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಬಳಿ ಕೇಳಿದರೆ. ಏನು ಹೇಳಿದ್ದಾರೋ ಅವರನ್ನೇ ಕೇಳಬೇಕು, ಅವರ ಬಳಿಯೇ ಹೋಗಿ ಕೇಳಿ. ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ. ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಹೇಳಿದ್ದೀವಿ, ಪಕ್ಷ ಏನು ಹೇಳುತ್ತೋ ಅದನ್ನು ಒಟ್ಟಿಗೆ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದ್ದೇವೆ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.