Hasan: ಹಾಸನಾಂಬೆ ದರ್ಶನಕ್ಕೆ ಶಾಸ್ತ್ರೋಕ್ತ ತೆರೆ
ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್ ಆಗಿದೆ.
ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಂತಿಮ ಪೂಜೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರ ಸಮ್ಮುಖದಲ್ಲಿ ಗರ್ಭಗುಡಿಗೆ ಅರ್ಚಕರು ಬೀಗ ಹಾಕಿದರು. ಈ ಮೂಲಕ 15 ದಿನಗಳ ಕಾಲ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.
ಈ ವರ್ಷ 26 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಟಿಕೆಟ್ ಹಾಗೂ ಲಡ್ಡು ಮಾರಾಟದಲ್ಲಿ ಈ ಬಾರಿ 22 ಕೋಟಿಗೂ ಅಧಿಕ ಆದಾಯ ಬಂದಿರೋದಾಗಿ ಸಚಿವ ಕೃಷ್ಣಬೈರೇಗೌಡರು ತಿಳಿಸಿದ್ದಾರೆ.
ಮುಂದಿನ ವರ್ಷದ ಹಾಸನಾಂಬೆ ಉತ್ಸವಕ್ಕೆ ದಿನಾಂಕ ನಿಗದಿ
ಮುಂದಿನ ವರ್ಷವೇ ಹಾಸನಾಂಬೆ ದರ್ಶನ ಭಾಗ್ಯ ಸಿಗಲಿದ್ದು, ಮುಂದಿನ ವರ್ಷದ ಹಾಸನಾಂಬೆ ಉತ್ಸವಕ್ಕೆ ಮುಹೂರ್ತ ಸಹ ಫಿಕ್ಸ್ ಆಗಿದೆ. ಮುಂದಿನ ವರ್ಷ 29-10-2026 ರಿಂದ 11-11-2026 ರವರೆಗೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಒಟ್ಟು 14 ದಿನ ಗರ್ಭಗುಡಿ ತೆರೆದಿರಲಿದ್ದು, ಈ ಪೈಕಿ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.