Chikkaballapur: ಬೈಕ್ ಗೆ ಶಾಲಾ ಬಸ್ ಡಿಕ್ಕಿ: ಮಕ್ಕಳು ಸೇರಿ ನಾಲ್ವರು ಸಾವು
ಬೈಕ್ ಹಾಗೂ ಶಾಲಾ ವಾಹನ ನಡುವೆ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ನಡೆದಿದೆ.
ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನು ಅದೇ ಬೈಕ್ನಲ್ಲಿದ್ದ ಮತ್ತೊಂದು ಮಗುವಿಗೆ ಗಂಭೀರ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದೆ. ಬಾಲಾಜಿ(34), ವೆಂಕಟೇಶಪ್ಪ(50), ಹರೀಶ್(12), ಆರ್ಯ(3) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮದುವೆಯಲ್ಲಿ ಭಾಗಿಯಾಗಲು ಬೈಕ್ನಲ್ಲಿ ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ಹಾಗೂ ಖಾಸಗಿ ಶಾಲಾ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ನಲ್ಲಿದ್ದ ಐವರ ಪೈಕಿ ನಾಲ್ವರು ಮೃತಪಟ್ಟಿದ್ದು, ಇನ್ನೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಸದ್ಯ ಮಗುವಿಗೆ ಬುರುಡುಗುಂಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.