Road Accident: ಬೆಂಗಳೂರು ರಸ್ತೆ ಗುಂಡಿಗೆ ಯುವತಿ ಬಲಿ
ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾರೆ.
ಪ್ರಿಯಾಂಕಾ (26) ಮೃತ ಯುವತಿ. ಮೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್. ಪ್ರಿಯಾಂಕಾ ಸಹೋದರನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು. ದಾಸನಪುರದ ಎಪಿಎಮ್‌ಸಿ ರಸ್ತೆಯಲ್ಲಿ ದೊಡ್ಡ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಸಹೋದರ ಬೈಕ್‌ನ ನಿಯಂತ್ರಣ ಕಳೆದುಕೊಂಡು ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಬಿದ್ದ ಪ್ರಿಯಾಂಕಾ ಮೇಲೆ ಟ್ರಕ್‌ನ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರೆ, ಸಹೋದರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.