krishna byregowda: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧ: ಕೃಷ್ಣಭೈರೇಗೌಡ
ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ. ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನವನ್ನು ನೀಡಿದೆ. ಅರ್ಹತೆಗೂ ಮೀರಿ ಅವಕಾಶಗಳನ್ನು ಪಕ್ಷ ನೀಡಿದೆ. ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.
ಸಚಿವ ಸ್ಥಾನದಿಂದ ನಾನು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ. ಆದರೆ ಕೆಲಸದಲ್ಲಿ ತೃಪ್ತಿ ಇಲ್ಲ. ಪಕ್ಷ ನನ್ನನ್ನು ಗುರುತಿಸಿ ಕೆಲಸ ಮಾಡಲು ಸಾಕಷ್ಟು ಅವಕಾಶ ನೀಡಿದೆ. ಅಗತ್ಯ ಬಿದ್ದರೆ ಸಚಿವ ಸ್ಥಾನದ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದುದ್ದಾರೆ.
ರಾಜ್ಯ ರಾಜಕಾರಣದಲ್ಲಿ ನವೆಂಬರ್ನಲ್ಲಿ ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಈ ಸಂದರ್ಭದಲ್ಲಿ ಕೃಷ್ಣಭೈರೇಗೌಡರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.