Dharmasthala: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತಿಮರೋಡಿ ಸೇರಿ ನಾಲ್ವರಿಗೆ ಎಸ್ಐಟಿ ನೋಟಿಸ್!
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ಎಸ್ಐಟಿ ನೋಟಿಸ್ ನೀಡಿದೆ.
ಅಕ್ಟೋಬರ್ 27 ರಂದು ಬೆಳಿಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ತನಿಖಾಧಿಕಾರಿ ಜಿತೇಂದ್ರ ದಯಾಮಾ ನೋಟಿಸ್ ನೀಡಿದ್ದಾರೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬಂಧನ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ, ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಿದ್ದುದಾಗಿ ವಿವರಿಸಲಾಗಿದೆ.