Bengaluru: ಹಿಂದೂ ಯುವತಿಗೆ ಲವ್, ಸೆಕ್ಸ್ ದೋಖಾ ಕೇಸ್: ಆರೋಪಿ ಬಂಧನ
ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ ಆರೋಪಿ ಇಶಾಕ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಇಶಾಕ್ ನನ್ನು ಪೊಲೀಸರು ಬಂದಿಸಿದ್ದಾರೆ.
ಇಶಾಕ್ ವಿರುದ್ಧ ಸಂತ್ರಸ್ತ ಯುವತಿ ಹೆಚ್ ಎಸ್ ಆರ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ಹಿನ್ನಲೆ
ಇಶಾಕ್ ಹಾಗೂ ಸಂತ್ರಸ್ತೆ ಹಿಂದೂ ಯುವತಿ ಇಬ್ಬರು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಅಲ್ಲಿಂದ ಸ್ನೇಹ ಬೆಳೆದು, ಪ್ರೀತಿ ಶುರುವಾಗಿತ್ತು. ಯುವತಿಯನ್ನು ಪುಸಲಾಯಿಸಿ ಆತ ಲಾಡ್ಸ್ ಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಇಬ್ಬರೂ ಪರಸ್ಪರ ಒಪ್ಪಿ ಲೈಂಗಿಕ ಕ್ರಿಯೆ ನಡೆಸಿದ್ದಾರೆ.
ಬಳಿಕ ಯುವತಿ ಮದುವೆಯಾಗುವಂತೆ ಕೇಳಿದ್ದಾಳೆ. ಆದರೆ ಆತ ಒಪ್ಪದೇ ಹಲವು ನೆಪ ಹೇಳಿ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಅಲ್ಲದೇ ನಿನ್ನನ್ನು ಮದುವೆ ಆಗಬೇಕೆಂದರೆ ನೀನು ಮತಾಂತರವಾಗಬೇಕು ಎಂದು ಬ್ಲಾಕ್ ಮೇಲ್ ಮಾಡಿದ್ದಾನೆ. ಇದರಿಂದ ನೊಂದ ಯುವತಿ ಹೆಚ್ ಎಸ್ ಆರ್ ಠಾಣೆಗೆ ದೂರು ನೀಡಿದ್ದಳು.