Fraud case: 3 ಕೋಟಿ ವಂಚಿಸಿದ ಮಹಿಳೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಜನ!

ಮಹಿಳೆಯೊಬ್ಬರು ಹಲವು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದು, ಮೋಸಹೊದ ಜನರು ಮಹಿಳೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ.

ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ತನ್ನ ಮಗಳನ್ನು ವಿದೇಶದಲ್ಲಿ ಎಮ್ ಎಸ್ ಓದಿಸಬೇಕೆಂದೂ, ಒಂದು ಕೋಟಿ ರೂ. ಮನೆ ಖರೀದಿಸಿದ್ದೇನೆಂದು ಹೇಳಿ ಸಾಲ ಪಡೆದಿದ್ದಳು. ಅಲ್ಲದೇ ಕೊಡಚಾದ್ರಿ ಚಿಟ್ಸ್​ನಲ್ಲಿ 1 ಕೋಟಿ ರೂ.ಗಳಿಗೂ ಅಧಿಕ ಚೀಟಿ ಹಾಕಿದ್ದೇನೆ, ಇದರಿಂದ ಕೆಲವೇ ತಿಂಗಳುಗಳಲ್ಲಿ ದುಪ್ಪಟ್ಟು ಹಣ ಬರಲಿದೆ ಎಂದು ನಕಲಿ ಸ್ಲಿಪ್ ತೋರಿಸಿ ಪರಿಚಯದ ಮಹಿಳೆಯರ ಬಳಿ ಸಾಲ ಪಡೆದಿದ್ದಳು.

ಹೇಮಾವತಿಯ ಮಾತುಗಳಿಗೆ ಮರುಳಾದ ಮಹಿಳೆಯರು ತಮ್ಮ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ಹಣವನ್ನು ಆಕೆಗೆ ನೀಡಿದ್ದಾರೆ. ಸುಮಾರು 3 ಕೋಟಿಗೂ ಅಧಿಕ ಹಣ ಪಡೆದು ಮೋಸ ಮಾಡಿರುವ ಆರೋಪ ಮಹಿಳೆ ಮೇಲಿದೆ. ಇನ್ನೂ ಓರ್ವ ಮಹಿಳೆಯಿಂದಲೇ 45 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಹೆಂಡತಿ ವಂಚನೆಗೆ ಪತಿ ವಿರೂಪಾಕ್ಷಪ್ಪ ಕೂಡ ಸಾಥ್ ನೀಡಿದ್ದಾರೆ. ಇಂದು ಟೈಲರ್ ಶಾಪ್ ಬಳಿ ಬಂದ ಮಹಿಳೆಯರು ಹೇಮಾವತಿಯನ್ನು ಹಿಡಿದೇಳೆದು ನಡುರಸ್ತೆಯಲ್ಲೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಹಲ್ಲೆಯ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Rakesh arundi

Leave a Reply

Your email address will not be published. Required fields are marked *