Money fraud: ವರ್ಕ್​ ಫ್ರಂ ಹೋಮ್ ಹೆಸರಿನಲ್ಲಿ 8000 ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದ ಬಾಬಾಸಾಹೇಬ್ ಕೋಲೇಕರ್ ತನ್ನನ್ನು ಅಜಯ್ ಪಾಟೀಲ್ ಎಂದು ಪರಿಚಯಿಸಿಕೊಂಡು, ಮನೆಯಲ್ಲಿ ಕುಳಿತುಕೊಂಡು ಅಗರಬತ್ತಿ ಪ್ಯಾಕ್ ಮಾಡುವ ಮೂಲಕ ಹಣ ಗಳಿಬಹುದುದೆಂದು ಎಂದು ಹೇಳಿದ್ದಾನೆ. ಅದಕ್ಕಾಗಿ ಗುರುತಿನ ಚೀಟಿ ಮಾಡಿಸಬೇಕು ಎಂದು ಒಬ್ಬ ಮಹಿಳೆಯಿಂದ ಒಂದು ಗುರುತಿನ ಚೀಟಿ ರಚಿಸಲು 2,500 ರಿಂದ 5,000 ರೂ.ಗಳವರೆಗೆ ಹಣವನ್ನು ಪಡೆದುಕೊಂಡಿದ್ದಾನೆ. ಪ್ರತಿಯೊಬ್ಬ ನೇಮಕಾತಿದಾರರು ಚೈನ್-ಮಾರ್ಕೆಟಿಂಗ್ ವ್ಯವಸ್ಥೆಯಡಿಯಲ್ಲಿ ಇನ್ನಿಬ್ಬರು ವ್ಯಕ್ತಿಗಳನ್ನು ಸಂಪರ್ಕಿಸುವಂತೆ ಒತ್ತಾಯಿಸಿದ್ದ.

ಹೀಗೆ ಸ್ವ-ಸಹಾಯ ಗುಂಪುಗಳನ್ನು ಗುರಿಯಾಗಿಸಿಕೊಂಡು ಚೈನ್-ಮಾರ್ಕೆಟಿಂಗ್ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದ್ದ. ಪ್ರತಿ ಮಹಿಳೆಯರ ಮನೆಗೆ ಅಗರಬತ್ತಿಗಳನ್ನು ತಲುಪಿಸಲು ಆಟೋ ರಿಕ್ಷಾ ಬಾಡಿಗೆಯಾಗಿ 2,500 ರಿಂದ 5,000 ರೂ.ಗಳವರೆಗೆ ಮುಂಗಡ ಹಣವನ್ನು ಪಡೆದಿದ್ದ. ಹೀಗೆ ಹಣ ಪಡೆದುಕೊಂಡು ಹೋದವನು ನಾಪತ್ತೆಯಾಗಿದ್ದಾನೆ. ಅತ್ತ ಅಗರಬತ್ತಿಯೂ ಇಲ್ಲ, ಇತ್ತ ನೀಡಿದ ಹಣ ಕೂಡ ವಾಪಸ್ ಬರದಿದ್ದಾಗ ಮಹಿಳೆಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Rakesh arundi

Leave a Reply

Your email address will not be published. Required fields are marked *