Bengaluru: ಧರ್ಮಸ್ಥಳ ಪ್ರಕರಣ; ಅಂತಿಮ ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್
ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್ಐಟಿಯವರು ಹೇಳಿದ್ದರು. 31ರೊಳಗೆ ಕೊಡಬಹುದು ಅಥವಾ ಒಂದೆರಡು ದಿನ ವಿಳಂಬವಾಗಬಹುದು. ಅಂತಿಮ ವರದಿಯನ್ನು ಕೊಡುವಂತೆ ಹೇಳಿದ್ದೇವೆ. ಪತ್ತೆಯಾಗಿರುವ ಮೂಳೆಗಳ ಎಫ್ಎಸ್ಎಲ್ ವರದಿ, ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ ಮಾಡಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.