Suicide: ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಆನಂದ

ಹುಬ್ಬಳ್ಳಿ ಮೂಲದ ಉದ್ಯಮಿ ಮತ್ತು ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ ಎಂಬುವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಮೇಶ ಹೆಗಡೆ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹುಬ್ಬಳ್ಳಿಯ ಭವಾನಿ ನಗರ ನಿವಾಸಿ. ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಹೂವಿನಹಡಗಲಿ ಪಟ್ಟಣಕ್ಕೆ ಆಗಮಿಸಿದ್ದ ಆನಂದ ಅವರು ದಾಕ್ಷಾಯಣಿ ಲಾಡ್ಜ್‌ನಲ್ಲಿ ಕೊಠಡಿ ಪಡೆದು ತಂಗಿದ್ದರು. ತಾವು ತಂಗಿದ್ದ ಕೋಣೆಯಲ್ಲೇ ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹುಬ್ಬಳ್ಳಿಯ ಭವಾನಿ ನಗರ ನಿವಾಸಿಯಾದ ಆನಂದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದು, ಕುಟುಂಬದವರು ಆಗಮಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೂವಿನಹಡಗಲಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಯನ್ನು ಅವರು ಟೆಂಡ‌ರ್ ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಆನಂದ ಹಾಗೂ ಸ್ನೇಹಿತರಾದ ಸುಧೀಂದ್ರ, ಗೌರೀಶ ಅವರು ಪಾಲುದಾರಿಕೆಯಲ್ಲಿ ಕಂಪನಿಯೊಂದನ್ನು ಸ್ಥಾಪಿಸಿ, ಅದರ ಹೆಸರಲ್ಲಿ ಟೆಂಡರ್‌ಗಳನ್ನು ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

Rakesh arundi

Leave a Reply

Your email address will not be published. Required fields are marked *