Bidar: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ಸಾವು
ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಸ್ನೇಹಿತರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೀದರ್‌ನ ಬಸವಕಲ್ಯಾಣ ತಾಲೂಕಿನ ರಾಮ್‌ಪೂರ್‌ವಾಡಿ ಗ್ರಾಮದಲ್ಲಿ ನಡೆದಿದೆ.
ಶರಣಪ್ಪ ಹಾಳಗೋರ್ಟೆ (10 ವರ್ಷ) ಮತ್ತು ಮೈಲಾರಿ ದೊಡಮನಿ (11 ವರ್ಷ) ಮೃತ ಬಾಲಕರು ಎಂದು ಗುರುತಿಸಲಾಗಿದೆ. ಅಕ್ಟೋಬರ್ 26ರಂದು ಶಾಲೆಗೆ ರಜೆ ಇದ್ದ ಕಾರಣ ಇಬ್ಬರು ಬಾಲಕರು ಗ್ರಾಮದ ಹೊರಭಾಗದಲ್ಲಿರುವ ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆ ಆಳವಾಗಿದ್ದು, ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತನನ್ನು ರಕ್ಷಿಸಲು ಹೋಗಿ, ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದೆ.