Bengaluru: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್

ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹೇಳಿ, ಆರ್ ಎಸ್ ಎಸ್ ಗೆ ಸರ್ಕಾರ ಕಡಿವಾಣ ಹಾಕಿತ್ತು. ಇದರೆ ಬೆನ್ನಲೇ ಸರ್ಕಾರಿ ಜಾಗಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಯತ್ನಾಳ್​ ಪತ್ರ ಬರೆದಿದ್ದಾರೆ.

ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

Rakesh arundi

Leave a Reply

Your email address will not be published. Required fields are marked *