Bengaluru: ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ: ಆರೋಪಿ ಬಂಧನ
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಘ್ನೇಶ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗೈದು ಬಳಿಕ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದ ವಿಘ್ನೇಶ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿನಿ ಕಾಲೇಜು ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯನ್ನು ಆರೋಪಿ ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರಾಕ್ ಬಳಿ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದ. ಪ್ರಕರಣ ಸಂಬಂಧ ಶ್ರೀರಾಂಪುರ ಪೊಲೀಸರು ಕಾರ್ಯಚರಣೆ ನಡೆಸಿ ವಿಘ್ನೇಶ್ ನನ್ನು ಬಂಧಿಸಿದ್ದಾರೆ.
ಯಾಮಿನಿ ಪ್ರಿಯಾ(20) ಮೃತ ಯುವತಿ. ವಿದ್ಯಾರ್ಥಿನಿ ಕಾಲೇಜು ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಬಂದ ಆರೋಪಿ ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರಾಕ್ ಬಳಿ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದ.
ಮಿಷನ್ ಯಾಮಿನಿ ಪ್ರಿಯಾ ಅಂತ ವಾಟ್ಸಪ್ ಗ್ರೂಪ್
ಮಿಷನ್ ಯಾಮಿನಿ ಪ್ರಿಯಾ ಎಂದು ವಾಟ್ಸಪ್ ಗ್ರೂಪ್ ಮಾಡಿಕೊಂಡು, ಹತ್ಯೆಗೆ ಪ್ಲ್ಯಾನ್ ಮಾಡಿದ್ದರು ಎಂದು ಗೊತ್ತಾಗಿದೆ. ಈ ಗ್ರೂಪ್‌ನಲ್ಲಿ ನಾಲ್ಕು ಜನರಿದ್ದು, ತನ್ನ ಪ್ರೇಯಸಿ ಎಲ್ಲಿಗೆ ಹೋಗ್ತಾಳೆ? ಯಾರ ಜೊತೆ ಮಾತನಾಡುತ್ತಾಳೆ? ಎಂದು ಡಿಟೇಲ್ಸ್ ಪಡಯುವ ಸಲುವಾಗಿ ಈ ಗ್ರೂಪ್ ಮಾಡಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.