Bengaluru: ಬೃಹತ್ ಮರ ಬಿದ್ದು ಯುವತಿ ಸ್ಥಳದಲ್ಲೇ ಸಾವು
ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ.
ಸೋಲದೇವನಹಳ್ಳಿಯಲ್ಲಿ ಬೈಕ್ನಲ್ಲಿ ಸ್ನೇಹಿತೆ ಜೊತೆ ಹೋಗುತ್ತಿದ್ದಾಗ ಮರ ಮುರಿದು ಬಿದ್ದಿದೆ. ಮರದ ಬಿದ್ದ ಹೊಡೆತಕ್ಕೆ ಕೀರ್ತನಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು, ಆಕೆಯ ಜೊತೆಗಿದ್ದ ಸ್ನೇಹಿತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭಾನುವಾರ ರಾತ್ರಿ 7 ಗಂಟೆಯ ಸುಮಾರಿಗೆ ದುರಂತ ಸಂಭವಿಸಿದೆ. ಯುವತಿಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರು ಭೇಟಿ ನೀಡಿದ್ದು , ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.